October 17, 2026
Saturday, October 17, 2026
spot_img

ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರ ಸಮ್ಮತಿ: ಜೂನ್ ಮೊದಲ ವಾರದಲ್ಲಿ ಪರಿಹಾರ ವಿತರಣೆ ಎಂದ ಡಿಕೆ ಶಿವಕುಮಾರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿರುವ ರಾಮನಗರ ಬಳಿಯ ಬಿಡದಿಯಲ್ಲಿ ಪ್ರಸ್ತಾವಿತ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆಗೆ ಶೇ. 80 ರಷ್ಟು ರೈತರು ಒಪ್ಪಿಗೆ ನೀಡಿದ್ದು, ಜೂನ್ ಮೊದಲ ವಾರದಲ್ಲಿ ಪರಿಹಾರ ವಿತರಣೆ ಆರಂಭವಾಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಘೋಷಿಸಿದ್ದಾರೆ.

ಬಿಡದಿ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆ ಕುರಿತು ಇಂದು ರೈತರೊಂದಿಗೆ ಮಹತ್ವದ ಸಭೆ ನಡೆಸಿದ ಬಳಿ ಸುದ್ದಿಗೋಷ್ಠಿ ನಡೆಸಿದ ಅವರು, ರೈತರಿಗೆ ಪರಿಹಾರದ ಕುರಿತು ನಾನು ಈಗಾಗಲೇ ಘೋಷಣೆ ಮಾಡಿದ್ದೇನೆ ಎಂದು ಹೇಳಿದರು.

ಭೂಸ್ವಾಧೀನಕ್ಕೆ ಅಧಿಸೂಚನೆ

ಈ ಸಂಬಂಧ ಭೂಸ್ವಾಧೀನಕ್ಕೆ ಗ್ರಾಮವಾರು ಅಂತಿಮ ಅಧಿಸೂಚನೆಗಳನ್ನು ಹೊರಡಿಸಲಾಗುವುದು. ಬಳಿಕ ಪರಿಹಾರವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರತ್ಯೇಕ ಹಂತಗಳಲ್ಲಿ ಯೋಜನೆ ಜಾರಿ

ಈ ಕುರಿತು ಜೂನ್ 30ರೊಳಗೆ ನೋಟಿಫಿಕೇಶನ್‌ಗಳನ್ನು ಪೂರ್ಣಗೊಳಿಸುವ ಗುರಿ ಹೊಂದಿದ್ದು, ಹಳ್ಳಿಗಳಂತೆ ವಿಭಾಗ ಮಾಡಿ ಪ್ರತ್ಯೇಕ ಹಂತಗಳಲ್ಲಿ ಯೋಜನೆ ಜಾರಿಗೆ ಬರಲಿದೆ ಎಂದರು.

ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲೇ ಇತ್ತು

ಇದೇ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ವಿರೋಧದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಯೋಜನೆ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ಹುಟ್ಟಿಕೊಂಡಿದ್ದು, ನಾನು ಪ್ರಾರಂಭಿಸಿದ ಯೋಜನೆ ಅಲ್ಲ. ಈ ಯೋಜನೆಯನ್ನು ಡಿಎಲ್‌ಎಫ್‌ಗೆ ನೀಡಲಾಗಿದೆ. ನಂತರ ಡಿಎಲ್‌ಎಫ್ ಇದು ಕಾರ್ಯಸಾಧ್ಯವಲ್ಲ ಎಂದು ಹೇಳಿ ಅದರಿಂದ ಹಿಂದೆ ಸರಿದಿದೆ ಎಂದು ಹೇಳಿದರು.

Must Read