ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಮನೇರ್ ಜಿಲ್ಲೆಯ ಮಹಾವೀರ್ ತೋಲಾ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಗಂಗಾ ನದಿಯಲ್ಲಿ ದೋಣಿ ಮುಳುಗಿ ಇಬ್ಬರು ನಾಪತ್ತೆಯಾಗಿದ್ದಾರೆ. ಪೊಲೀಸರ ಪ್ರಕಾರ, ದೋಣಿಯಲ್ಲಿ ಸುಮಾರು 10 ರಿಂದ 12 ರೈತರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ದೋಣಿಯಲ್ಲಿದ್ದ ಉಳಿದವರೆಲ್ಲರೂ ಈಜಿಕೊಂಡು ದಡಕ್ಕೆ ಬಂದಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
“ಬೆಳಿಗ್ಗೆ, 7 ರಿಂದ 8 ರ ಸುಮಾರಿಗೆ, ಕೆಲವು ರೈತರು ತಮ್ಮ ತರಕಾರಿಗಳನ್ನು ದೋಣಿಯಲ್ಲಿ ತೆಗೆದುಕೊಂಡು ಹೋಗುತ್ತಿದ್ದರು ಮತ್ತು ಅವರು ಮಹಾವೀರ ತೋಲಾ ಘಾಟ್ ಅನ್ನು ತಲುಪಲು ಮುಂದಾದಾಗ, ದೋಣಿ ಮುಳುಗಿತು” ಎಂದು ಮನೇರ್ ಪೊಲೀಸ್ ಠಾಣೆಯ ಮುಖ್ಯಸ್ಥ ಸುನಿಲ್ ಕುಮಾರ್ ಭಗತ್ ತಿಳಿಸಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಕ್ಷಣ ಘಟನಾ ಸ್ಥಳಕ್ಕೆ ತಲುಪಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.