ಹೊಸ ದಿಗಂತ ವರದಿ, ಹಾವೇರಿ:
ರೈತರಿಗೆ ನೀಡುತ್ತಿರುವ ಸಾಲದ ನೋಟೀಸ್ ಕೈಬಿಟ್ಟು, ಅವರ ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಲು ಸರ್ಕಾರ ಮುಂದಾಗಲಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ ಬಣದ ಜಿಲ್ಲಾದ್ಯಕ್ಷ ಹನುಮಂತಪ್ಪ ಹುಚ್ಚಣ್ಣವರ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ರೈತರ ಸಾಲಗಳನ್ನು ದೀರ್ಘಾವಧಿಗೆ ಪರಿವರ್ತಿಸಿ ಹೊಸ ಸಾಲ ನೀಡುವ ಮೂಲಕ ಕೃಷಿಯನ್ನು ಮುಂದುವರೆಸಿಕೊಂಡು ಹೋಗಲು ಸರ್ಕಾರ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದರು.
ಜಿಲ್ಲೆಗೆ ಭೇಟಿ ನೀಡಿದ ವೇಳೆ ಸಿಎಂ ಸಿದ್ದರಾಮಯ್ಯ ಕೃಷಿ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಹೇಳಿಕೆ ನೀಡಿ ಈಗ ಸುಮ್ಮನಾಗಿದ್ದಾರೆ. ಅದಕ್ಕೆ ಗ್ಯಾರಂಟಿಯಂತೆ ಯಾವುದೇ ಹಣ ಹೊಂದಿಸುವ ಅವಶ್ಯಕತೆ ಇಲ್ಲ. ಕೂಡಲೇ ಕಾಯ್ದೆ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು.
ಈ ವೇಳೆ ರೈತ ಮುಖಂಡರಾದ ಟಿ.ಡಿ.ಬಸವರಾಜ, ರುದ್ರಪ್ಪ ಬಳಿಗಾರ, ಶಂಕ್ರಗೌಡ ಪಾಟೀಲ, ಶಿವನಗೌಡ ಗಾಜಿಗೌಡ್ರ, ಆನಂದ ಕೆಳಗಿನಮನಿ ಮತ್ತಿತರರು ಇದ್ದರು.