ವಕ್ಫ್ ಮಂಡಳಿಯ ಭೂಕಳ್ಳತನದ ಮಾಫಿಯಾಗೆ ರೈತರು ಬೇಸತ್ತಿದ್ದಾರೆ: ಜೋಶಿ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ವಕ್ಫ್ ಭೂಮಿಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ರೈತರ ನಡುವೆ ಯುದ್ಧವೇ ನಡೆಯುತ್ತಿದೆ. ವಕ್ಫ್ ಬೋರ್ಡ್ ನ ಭೂಗಳ್ಳತನ ಮಾಫಿಯಾದಿಂದ ಬೇಸತ್ತು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾನಗಲ್ ತಾಲೂಕಿನ ಹರನಗಿರಿಯಲ್ಲಿ ಮೊನ್ನೆ ಮೊನ್ನೆ ನಡೆದಿದೆ. ವಕ್ಫ್ ಹಿಂಸೆಗೆ ಇನ್ನೆಷ್ಟು ಬಲಿ ಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಪ್ರಶ್ನೆ ಮಾಡಿದ್ದಾರೆ.

2015ರಲ್ಲಿ ಕೆಲವು ಸಮಾಜಘಾತುಕರು 1964ರಿಂದ ಅವರ ಹೆಸರಿನಲ್ಲಿದ್ದ ಜಮೀನನ್ನು ವಶಪಡಿಸಿಕೊಂಡು ಬೆಳೆಗಳನ್ನು ಸಂಪೂರ್ಣವಾಗಿ ನಾಶಪಡಿಸಿ ಬಡ ರೈತನಿಂದ ಬಲವಂತವಾಗಿ ಜಮೀನು ಕಬಳಿಸಿದ್ದಾರೆ, ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾದ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಜೋಶಿ ಟ್ವೀಟ್ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!