ದೆಹಲಿಯಲ್ಲಿ ರೈತರ ಮಹಾಪಂಚಾಯತ್:‌ ಎಲ್ಲೆಡೆ ಬಿಗಿ ಬಂದೋಬಸ್ತ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ನಿರುದ್ಯೋಗದ ವಿರುದ್ಧ ಪ್ರತಿಭಟಿಸಲು ಸಂಯುಕ್ತ ಕಿಸಾನ್ ಮೋರ್ಚಾ (SKM) ಮತ್ತು ಇತರ ರೈತ ಗುಂಪುಗಳು ಇಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಮಹಾಪಂಚಾಯತ್ ಆಯೋಜಿಸಿದ್ದು ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಎಲ್ಲೆಡೆ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಎಲ್ಲೆಡೆ 144 ಸೆಕ್ಷನ್‌ ಜಾರಿಗೊಳಿಸಲಾಗಿದ್ದು ದೆಹಲಿಯ ಮೂರು ಗಡಿ ಪ್ರವೇಶ ಬಿಂದುಗಳಾದ ಗಾಜಿಪುರ, ಸಿಂಘು ಮತ್ತು ಟಿಕ್ರಿಯಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ಭಾರೀ ಪೊಲೀಸ್ ಮತ್ತು ಭದ್ರತೆಯ ನಡುವೆ ಪ್ರತಿಭಟನೆ ನಡೆಸಲು ರೈತರು ಜಂತರ್ ಮಂತರ್‌ಗೆ ಆಗಮಿಸುತ್ತಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಣದಲ್ಲಿಡಲು ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಇನ್ನು ಪ್ರತಿಭಟನೆಗೆ ಆಗಮಿಸುತ್ತಿದ್ದ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಅವರನ್ನು ಗಾಜಿಪುರ ಗಡಿಯಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ.

“ಸರ್ಕಾರದ ಆದೇಶದಂತೆ ಕೆಲಸ ಮಾಡುವ ದೆಹಲಿ ಪೊಲೀಸರು ರೈತರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಈ ಬಂಧನ ಹೊಸ ಕ್ರಾಂತಿಯನ್ನು ತರಲಿದೆ. ಕೊನೆಯ ಉಸಿರು ಇರುವವರೆಗೂ ಈ ಹೋರಾಟ ಮುಂದುವರಿಯಲಿದೆ. ನಿಲ್ಲುವುದಿಲ್ಲ, ಸುಸ್ತಾಗುವುದಿಲ್ಲ, ತಲೆಬಾಗುವುದಿಲ್ಲ,’’ ಎಂದು ಹಿಂದಿಯಲ್ಲಿ ಟಿಕಾಯತ್ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!