ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಕ್ಟೊಬರ್ 15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಹೊರಡಿಸಿದ ಆದೇಶ ನೀಡಿದೆ. ಆದೇಶದ ವಿರುದ್ಧ ಮಂಡ್ಯದಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಈ ವಿಚಾರವಾಗಿ ಮಾತನಾಡಬೇಕು. ಸಂಜೆ ಆರು ಗಂಟೆ ಒಳಗೆ ನಿಮ್ಮ ಅಭಿಪ್ರಾಯವನ್ನ ಸರ್ಕಾರ ತಿಳಿಸಬೇಕು. ಇಲ್ಲವಾದರೇ ಹೋರಾಟದ ರೂಪ ಬದಲಾಗುತ್ತದೆ. ಪ್ರಾಧಿಕಾರದ ಆದೇಶ ಖಂಡಿಸುತ್ತೇವೆ. ಪ್ರಾಧಿಕಾರ ರದ್ದು ಮಾಡಬೇಕು ಎಂದು ರೈತರು ಆಕ್ರೋಶ ಹೊರಹಾಕಿದ್ದು, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಪ್ರತಿಭಟಿಸಿದರು.
ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಎಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ ಕನ್ನಡ ಪರ ಸಂಘಟನೆಗಳು ರಾಜ್ಯದಂತ ಪ್ರತಿಭಟನೆ ಮತ್ತು ಹೋರಾಟ ನಡೆಸುತ್ತಿದ್ದು ಕರ್ನಾಟಕ ಬಂದ್ ಬಹುತೇಕ ಯಶಸ್ವಿಯಾಗಿ ನಡೆದಿದೆ. ಇದರ ಮಧ್ಯ ಬೆಂಗಳೂರಿನಲ್ಲಿ ಕನ್ನಡ ಪರ ಹಿರಿಯ ಹೋರಾಟಗಾರ ವಾಟಳ್ ನಾಗರಾಜ್ ಅ.೫ರಂದು ಕೆ ಆರ್ ಎಸ್ ಮುತ್ತಿಗೆಗೆ ಕರೆ ನೀಡಿದ್ದಾರೆ.