Wednesday, August 10, 2022

Latest Posts

ಮಡಿಕೇರಿಯಲ್ಲಿ ಕಾಡಾನೆ ಹಾವಳಿಗೆ ಕಂಗಾಲಾದ ರೈತರು: ಅಪಾರ ಬೆಳೆಹಾನಿ

ಹೊಸದಿಗಂತ ವರದಿ, ಮಡಿಕೇರಿ:
ಮದೆನಾಡು ಗ್ರಾ.ಪಂ ವ್ಯಾಪ್ತಿಯ ಬೆಳಕುಮಾನಿಯಲ್ಲಿ ಕಾಡಾನೆಗಳ ಹಾವಳಿಯಿಂದ ಕೃಷಿ ಪಸಲು ನಷ್ಟವಾಗುತ್ತಿರುವ ಹಿನ್ನೆಲೆ ರೈತರು ಕಂಗಾಲಾಗಿದ್ದಾರೆ.
ಗ್ರಾಮ ವ್ಯಾಪ್ತಿಯ ತೋಟದಲ್ಲಿ ಆನೆಗಳ ಹಿಂಡು ಬೀಡುಬಿಟ್ಟಿದ್ದು, ಪರಶುರಾಮ್ ಎಂಬವರ ಕಾಫಿ ತೋಟಕ್ಕೆ ನುಗ್ಗಿ ಕಾಫಿ ಗಿಡಗಳನ್ನು ನಾಶಪಡಿಸಿದೆ. ಅಲ್ಲದೆ ಗ್ರಾಮದ ಸುತ್ತ ಮುತ್ತ ಬೆಳೆಗಳನ್ನು ಧ್ವಂಸಗೊಳಿಸಿದೆ.
ಕಾಡಾನೆ ಹಾವಳಿ ನಿಯಂತ್ರಣಕ್ಕೆ ಹಲವು ಬಾರಿ ಅರಣ್ಯ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಬೆಳೆಗಾರರು, ಇನ್ನಾದರೂ ಸೂಕ್ತ ಕ್ರಮ ಕೈಗೊಂಡು ಆನೆಗಳನ್ನು ಕಾಡಿಗೆಗಟ್ಟುವಂತೆ ಆಗ್ರಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss