ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನಿಷ್ಠ ಬೆಂಬಲ ಬೆಲೆ, ರೈತರಿಗೆ ಪಿಂಚಣಿ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಇಂದು ದೆಹಲಿಗೆ ತಲುಪಲಿದೆ.
ದೆಹಲಿವರೆಗೂ ಪಾದಯಾತ್ರೆ ಮಾಡಲು ರೈತರು ನಿರ್ಧಾರ ಮಾಡಿದ್ದು, ಟಿಕ್ರಿ, ಸಿಂಘು ಹಾಗೂ ಘಾಜಿಪುರ ಗಡಿಗಳಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.
ಮೆಟ್ರೋ, ರೈಲ್ವೆ ಹಾಗೂ ಬಸ್ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ನಿಗಾ ಇರಿಸಲಾಗಿದೆ. ಪಂಜಾಬ್ ಮತ್ತು ಹರ್ಯಾಣ ಗಡಿಯನ್ನು ಮುಚ್ಚಲಾಗಿದೆ.