ಹಳಿಗಳ ಮೇಲೆ ಮುಂದುವರಿದ ರೈತರ ಪ್ರತಿಭಟನೆ: ಅಂಬಾಲ-ಅಮೃತಸರದ 54 ರೈಲುಗಳ ಸಂಚಾರ ಬಂದ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
 
ಪಂಜಾಬ್‌ನ ಪಟಿಯಾಲ ಜಿಲ್ಲೆಯ ಶಂಭು ರೈಲು ನಿಲ್ದಾಣದ ಬಳಿ ರೈತರು ಸತತ ನಾಲ್ಕನೇ ದಿನವೂ ಹಳಿಗಳ ಮೇಲೆ ಪ್ರತಿಭಟನೆ ಮುಂದುವರಿಸಿದ್ದು, ಇದರಿಂದಾಗಿ ಅಂಬಾಲ-ಅಮೃತಸರ ಮಾರ್ಗದ 54 ರೈಲುಗಳ ಸಂಚಾರವನ್ನು ಶನಿವಾರ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್‌-ಹರಿಯಾಣ ಗಡಿಯ ಶಂಭುವಿನಲ್ಲಿ ಸಾಗುವ ಅಂಬಾಲ-ಲೂಧಿಯಾನ-ಅಮೃತಸರ ಮಾರ್ಗದಲ್ಲಿ ಹಳಿಗಳ ಮೇಲೆ ರೈತರು ಬುಧವಾರ ಪ್ರತಿಭಟನೆ ಆರಂಭಿಸಿದ್ದರು. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಅವರ ಬಿಡುಗಡೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.

ರೈತರ ಪ್ರತಿಭಟನೆಯಿಂದಾಗಿ 54 ರೈಲುಗಳ ಸಂಚಾರವನ್ನು ಇಂದು (ಶನಿವಾರ) ಸ್ಥಗಿತಗೊಳಿಸಲಾಗಿದೆ. ಕಳೆದ ಮೂರು ದಿನಗಳಲ್ಲಿ ಸುಮಾರು 380 ರೈಲುಗಳ ಸಂಚಾರದ ಮೇಲೆ ಪ್ರತಿಭಟನೆಯ ಬಿಸಿ ತಟ್ಟಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

‘ಸಂಯುಕ್ತ ಕಿಸಾನ್‌ ಮೋರ್ಚಾ’ (ಎಸ್‌ಕೆಎಂ) ಹಾಗೂ ‘ಕಿಸಾನ್‌ ಮಜ್ದೂರ್‌ ಮೋರ್ಚಾ’ (ಕೆಎಂಎಂ) ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.ಬಂಧಿತರ ಬಿಡುಗಡೆಯಾಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ರೈತ ನಾಯಕ ಸರವಣ್‌ ಸಿಂಗ್‌ ಪಂಧೇರ್‌ ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!