2ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ಈಗಲೂ ಮಾತನಾಡಲು ಸಿದ್ಧ ಎಂದ ಕೇಂದ್ರ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನಿಷ್ಠ ಬೆಂಬಲ ಬೆಲೆ, ರೈತರಿಗೆ ಪಿಂಚಣಿ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ರೈತರು ಬೃಹತ್ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಎರಡನೇ ದಿನಕ್ಕೆ ಪ್ರತಿಭಟನೆ ಕಾಲಿಟ್ಟಿದ್ದು, ತಮಿಳುನಾಡಿನ ರೈತರು ಕೂಡ ಬೆಂಬಲ ಘೋಷಣೆ ಮಾಡಿದ್ದಾರೆ. ಪಂಜಾಬ್‌ನ ರೈತರು ಹರಿಯಾಣದ ಅಂಬಾಲ ನಗರ ಸಮೀಪದ ಶಂಭು ಗಡಿಯಲ್ಲಿದ್ದಾರೆ. ಇಂದು ಮತ್ತೆ ದೆಹಲಿ ಪ್ರವೇಶಿಸುವ ಪ್ರಯತ್ನವನ್ನು ಮತ್ತೆ ಮಾಡಲಿದ್ದಾರೆ.

ಗಡಿಗಳಲ್ಲಿ ಬ್ಯಾರಿಕೇಡ್, ತಂತಿ, ಮೊಳೆಗಳು ಹೀಗೆ ಸಾಕಷ್ಟು ಅಡೆಡಗಳನ್ನು ಇಟ್ಟು ರೈತರನ್ನು ತಡೆಯುವ ಪ್ರಯತ್ನ ಮಾಡಲಾಗುತ್ತಿದೆ. ರೈತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಬ್ಯಾರಿಕೇಡ್ ಮುರಿಯುವ ಪ್ರಯತ್ನಗಳನ್ನು ಮಾಡಲಾಗಿದೆ. ಈ ವೇಳೆ ಪೊಲೀಸರು ಅಶ್ರುವಾಯು ಮತ್ತು ಜಲ ಫಿರಂಗಿಗಳನ್ನು ಬಳಸಿ ನಿಯಂತ್ರಣಕ್ಕೆ ಪ್ರಯತ್ನಿಸಿದ್ದರು. ಇದರಿಂದ ರೈತರು ಆಕ್ರೋಶಗೊಂಡಿದ್ದರು.

ಇಂದು ಮತ್ತೆ ಹತ್ತು ಸಾವಿರಕ್ಕೂ ಹೆಚ್ಚು ರೈತರೊಂದಿಗೆ ದೆಹಲಿ ಪ್ರವೇಶಕ್ಕೆ ಸಜ್ಜಾಗಿದ್ದು, ಕೇಂದ್ರ ಬೇಡಿಕೆಗಳನ್ನು ಒಪ್ಪುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ರೈತರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!