ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ರೈತರು ಚಳಿ, ಗಾಳಿಯೆನ್ನದೆ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ 7ನೇ ದಿನಕ್ಕೆ ಪ್ರವೇಶಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಂಗಳವಾರದಿಂದಲೇ ರೈತರ ಜೊತೆ ಹೋರಾಟಕ್ಕಿಳಿದಿದ್ದಾರೆ. ಬೆಳಗಾವಿಯ ಗುರ್ಲಾಪುರದ ಪ್ರತಿಭಟನೆ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ್ದ ವಿಜಯೇಂದ್ರ ರಾತ್ರಿಯೂ ರೈತರ ಜೊತೆ ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾದರು.
ಕಳೆದ 6 ದಿನಗಳಿಂದ ರೈತರು ಶಾಂತಿಯುತ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಹೋರಾಟದ ಕಿಚ್ಚು ಅಕ್ಕಪಕ್ಕದ ತಾಲೂಕಿನಲ್ಲಿ ಬೆಳೆಯುತ್ತಿದೆ. ಆದರೆ ಯಾವೊಬ್ಬ ಸಚಿವರೂ ಸ್ಥಳಕ್ಕೆ ಬಂದಿಲ್ಲ ಎಂದು ವಿಜಯೇಂದ್ರ ಆಕ್ರೋಶ ಹೊರಹಾಕಿದರು.

