February 19, 2026
Thursday, February 19, 2026
spot_img

ಬಟಿಂಡಾದಲ್ಲಿ ರೈತರ ಪ್ರತಿಭಟನೆ ಉದ್ರಿಕ್ತ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಂಡೀಗಢ ಸಮೀಪದ ಬಟಿಂಡಾ ಜಿಲ್ಲೆಯ ಜಿಯೋಂಡ್ ಪ್ರದೇಶದಲ್ಲಿ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಘಟನೆ ನಡೆದಿದೆ. ಜಿಲ್ಲಾ ಆಡಳಿತ ಕಚೇರಿ ಸಂಕೀರ್ಣದ ಕಡೆ ಮೆರವಣಿಗೆ ನಡೆಸಲು ಮುಂದಾದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತೀವ್ರ ಘರ್ಷಣೆ ಉಂಟಾಯಿತು. ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದ್ದಂತೆ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಗುಂಪನ್ನು ಚದುರಿಸಿದರು.

ಘರ್ಷಣೆಗೆ ಮುನ್ನ ಎರಡೂ ಕಡೆಯಿಂದ ಕಲ್ಲು ಹಾಗೂ ಇಟ್ಟಿಗೆ ತೂರಾಟ ನಡೆದಿದ್ದು, ಹಲವಾರು ರೈತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಗರ ಪ್ರವೇಶಿಸುವ ಪ್ರಮುಖ ರಸ್ತೆಗಳಲ್ಲೆಲ್ಲ ನಾಕಾಬಂಧಿ ಮಾಡಲಾಗಿತ್ತು. ಕಾರ್ಯಾಚರಣೆ ಆರಂಭವಾದ ಮಂಗಳವಾರ ರಾತ್ರಿ ಹಲವು ರೈತ ಮುಖಂಡರನ್ನು ಬಂಧಿಸಲಾಗಿದೆ ಅಥವಾ ಗೃಹಬಂಧನದಲ್ಲಿರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಹಿಳೆಯರನ್ನು ಸೇರಿಸಿ ಕೆಲವರನ್ನು ಜಿಯೋಂಡ್ ಗ್ರಾಮದಲ್ಲೇ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:

ಬಟಿಂಡಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜ್ಯೋತಿ ಯಾದವ್, ಕೆಲವರು ಪೊಲೀಸ್ ಸಿಬ್ಬಂದಿ ಹಾಗೂ ಮನೆಗಳ ಮೇಲ್ಛಾವಣಿಗಳ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನೆಲೆ ಅಶ್ರುವಾಯು ಬಳಕೆ ಅನಿವಾರ್ಯವಾಯಿತು ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !