October 13, 2026
Tuesday, October 13, 2026
spot_img

ಬೆಳಗಾವಿಯಲ್ಲಿ ರೈತರ ಪ್ರತಿಭಟನೆ: ಆದಷ್ಟು ಬೇಗ ಕಬ್ಬಿಗೆ ಬೆಲೆ ನಿಗದಿ ಎಂದ ಪರಮೇಶ್ವರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾಧ್ಯವಾದಷ್ಟು ಬೇಗ ಕಬ್ಬಿನ ಬೆಲೆಯನ್ನು ನಿಗದಿಪಡಿಸಿ ಸಮಸ್ಯೆಯನ್ನು ಪರಿಹರಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಬೆಳಗಾವಿ ಪ್ರತಿಭಟನೆ ಕುರಿತು ಸಚಿವ ಶಿವಾನಂದ ಪಾಟೀಲ್ ಜೊತೆ ಚರ್ಚೆ ನಡೆಸಲಾಗಿದ್ದು, ಆದಷ್ಟು ಬೇಗ ಕಬ್ಬಿಗೆ ಬೆಲೆ ನಿಗದಿ ಮಾಡಿ ಸಮಸ್ಯೆ ಬಗೆಹರಿಸುವಂತೆ ತಿಳಿಸಲಾಗಿದೆ. ಇಲ್ಲದಿದ್ರೆ ಪೊಲೀಸರಿಗೆ ಪರಿಸ್ಥಿತಿ ನಿಭಾಯಿಸುವುದು ಕಷ್ಟ ಆಗುತ್ತದೆ ಎಂದು ತಿಳಿಸಿದ್ದೇನೆಂದು ಹೇಳಿದರು.

ಸತೀಶ್ ಜಾರಕಿಹೊಳಿ ಸೇರಿ ಆ ಭಾಗದ ಸಚಿವರು ಸಮಸ್ಯೆ ಬಗೆಹರಿಸುವ ಭರವಸೆ ಕೊಟ್ಟಿದ್ದಾರೆ. ನಿನ್ನೆ ಒಬ್ಬರು ರೈತರು ಆತ್ಮಹತ್ಯೆ ಪ್ರಯತ್ನ ಮಾಡಿದ್ದರು. ಪೊಲೀಸರು ಅವರನ್ನು ರಕ್ಷಣೆ ಮಾಡಿದ್ದಾರೆ. ಈ ರೀತಿಯ ಘಟನೆಗಳು ಮರುಕಳಿಸಬಾರದು. ಬಿಜೆಪಿಯವರು ಸಹಜವಾಗಿ ಇಂತಹ ಸಂದರ್ಭದಲ್ಲಿ ಬೆಂಬಲ ಕೊಟ್ಟಿದ್ದಾರೆ. ಇಂತಹ ಅವಕಾಶ ಮತ್ತೆ ಸಿಕ್ಕರೆ ಬಿಡುತ್ತಾರಾ? ಸರ್ಕಾರ ಕುರ್ಚಿ ಕಚ್ಚಾಟದಲ್ಲಿ ತೊಡಗಿದೆ ಎಂದು ಬಿಜೆಪಿಯವರು ಆರೋಪಿಸುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಏನಾಗಿತ್ತು ಎಂದು ಅವರೇ ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

Must Read