ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೃಷಿ ಕಾಯ್ದೆ ವಿರುದ್ಧ ಇಂದು ಜಂತರ್ ಮಂತರ್ ನಲ್ಲಿ ರೈತರ ಪ್ರತಿಭಟನೆ: ಪೊಲೀಸರಿಂದ ತೀವ್ರ ಭದ್ರತೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರದ ನೂತನ ಕೃಷಿ ಕಾಯ್ದೆ ವಿರುದ್ಧ ರೈತರು ಹಲವು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದು, ಇಂದು ಅಧಿವೇಶನ ನಡೆಯುತ್ತಿರುವ ಸಂಸತ್‌ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ಕೊಟ್ಟಿದ್ದಾರೆ.

ದೆಹಲಿ ಪೊಲೀಸರು ರೈತರಿಗೆ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಿದ್ದಾರೆ. 2,500 ಪೊಲೀಸರು ಮತ್ತು 3,000 ಅರೆಸೇನಾ ಪಡೆಗಳನ್ನು ರೈತರು ಪ್ರತಿಭಟನೆ ಆರಂಭಿಸುವ ಸಿಂಘು ಗಡಿಯಲ್ಲಿ ನಿಯೋಜಿಸಲಾಗಿದೆ.

ಜಂತರ್‌ ಮಂತರ್‌ಗೆ ಸಿಂಘು ಗಡಿಯಿಂದ ರೈತರು ಬಸ್‌ಗಳಲ್ಲಿ ತೆರಳಲಿದ್ದು, ಅಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಬಳಿಕ ಸಂಸತ್‌ ಭವನದವರೆಗೆ ಮೆರವಣಿಗೆ ನಡೆಸಲಿದ್ದಾರೆ. ಈ ಹಿನ್ನೆಲೆ ಸಂಸತ್‌ನ ಮಾರ್ಗದುದ್ದಕ್ಕೂ ಹಿಂಸಾಚಾರ ತಡೆಗೆ ಕಟ್ಟೆಚ್ಚರ ವಹಿಸಿದ್ದಾರೆ. ದೆಹಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಸಂಸತ್ ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆ ಮುಂದುವರೆಯಲಿದೆ. ಪ್ರತಿದಿನ ಬೆಳಗ್ಗೆ 200 ರೈತರಿಂದ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಪ್ರತಿಭಟನೆ ನಡೆಯಲಿದೆ ಎಂದು ರೈತರು ಪೊಲೀಸರಿಗೆ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss