Tuesday, June 28, 2022

Latest Posts

ಸೋಮವಾರಪೇಟೆಯಲ್ಲಿ ರೈತರ ಪ್ರತಿಭಟನೆ

ದಿಗಂತ ವರದಿ ಸೋಮವಾರಪೇಟೆ:

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪಟ್ಟಣದಲ್ಲಿ ಜಿಲ್ಲಾ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.
ಕಳೆದ 17 ದಿನಗಳಿಂದ ಇಲ್ಲಿನ ಜೆ.ಸಿ.ವೇದಿಕೆಯಲ್ಲಿ ರೈತರು ನಿರಂತರ ಧರಣಿ ನಡೆಸುತ್ತಿದ್ದು, ವಿವಿಧ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಆದರೆ ರೈತರ ಬೇಡಿಕೆಗಳ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಗಮನಸೆಳೆಯುವಲ್ಲಿ ವಿಫಲರಾಗಿದ್ದಾರೆ.ರಾಜ್ಯ ಸರ್ಕಾರ ಕೊಡಗಿನ ರೈತರ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಮನು ಸೋಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಕಳೆದ 17 ದಿನಗಳ ಧರಣಿ ಅಂತ್ಯಗೊಳಿಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಪಟ್ಟಣದ ಬಸವೇಶ್ವರ ಪ್ರತಿಮೆ ಬಳಿಯಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಜೆ.ಸಿ.ವೇದಿಕೆಯಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು.
ಈ ಸಂದರ್ಭ ಜಿಲ್ಲೆಯ ವಿವಿಧ ಭಾಗಗಳಿಂದ ರೈತರು ಪಾಲ್ಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss