Friday, November 7, 2025

ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ: ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಬ್ಬು ದರ ನಿಗದಿಗಾಗಿ ರೈತರು ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಉದ್ವಿಗ್ನಗೊಂಡ ಪ್ರತಿಭಟನಾಕಾರರ ಗುಂಪು, ಪೊಲೀಸರು, ಪೊಲೀಸ್ ವಾಹನಗಳ ಮೇಲೆಯೇ ಕಲ್ಲು ತೂರಾಟ ನಡೆಸಿದೆ.

ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟಿಸಿದರು. ಸರ್ಕಾರದ ನಿರ್ಧಾರ ಪ್ರಕಟಕ್ಕೂ ಮುನ್ನವೇ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದರು. ಹತ್ತರಗಿ ಟೋಲ್ ಬಳಿ ರೈತರು ಜಮಾವಣೆಗೊಂಡು ಪ್ರತಿಭಟಿಸುತ್ತಿದ್ದಾಗ ಘಟನೆ ನಡೆದಿದೆ. ಪೊಲೀಸ್ ವಾಹನಗಳ ಮೇಲೂ ಕಲ್ಲು ತೂರಿದರು. ಪರಿಸ್ಥಿತಿ ನಿಯಂತ್ರಿಸಲಾಗದೇ ಸ್ಥಳದಿಂದ ಪೊಲೀಸರು ಓಡಿದರು.

ಪ್ರತಿಭಟನೆ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 4ರ ಹತ್ತರಗಿ ಟೋಲ್ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. 250ಕ್ಕೂ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದರು. ಪ್ರತಿಭಟನೆ ಮಾಡುವ ರೈತರನ್ನು ವಶಕ್ಕೆ ಪಡೆಯಲು 5 ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು.

error: Content is protected !!