ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ದಸರಾ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಿರುವುದನ್ನು ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಇಂದು ನಡೆದಿದೆ.
ಬರದ ನಡುವೆಯೂ ಸಾಂಪ್ರದಾಯಿಕ ಆಚರಣೆಯನ್ನು ಅದ್ಧೂರಿಯಾಗಿ ಆಚರಣೆ ಮಾಡಿರುವುಕ್ಕೆ ವಿರೋಧಿಸಿ ರೈತರು ಇಂದು ಪ್ರತಿಭಟನೆಗೆ ಮುಂದಾಗಿದ್ದರು.
ರೈತ ಮುಖಂಡ ಭಾಗ್ಯರಾಜ್ ಸೇರಿದಂತೆ ಜಂಬೂ ಸವಾರಿ ವೀಕ್ಷಣೆಗೆ ಹಾಕಿದ್ದ ಗ್ಯಾಲರಿಯಲ್ಲಿ ಕುಳಿತಿದ್ದ ರೈತರನ್ನು ಬಂಧಿಸಿದ ಪೊಲೀಸರು ಜೀಪ್ನಲ್ಲಿ ಕರೆದೊಯ್ದಿದ್ದಾರೆ.