Monday, August 8, 2022

Latest Posts

ದೀದಿ ಪರ ಪ್ರಚಾರದ ಕಣದಲ್ಲಿ ಪಂಜಾಬ್ ರೈತ ಮುಖಂಡರು!

ಹೊಸದಿಗಂತ ಆನ್ ಲೈನ್ ಡೆಸ್ಕ್:

ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್ ರೈತರು ಇದೀಗ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರ ಚುನಾವಣೆ ಪ್ರಚಾರಕ್ಕೆ ಇಳಿಯಲಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಪ್ರಚಾರ ನಡೆಸಲು ಎಂಟು ಮಂದಿ ಸನ್ಯುಕ್ತಾ ಕಿಸಾನ್ ಮೋರ್ಚಾದ ರೈತ ಮುಖಂಡರು ಕೊಲ್ಕತ್ತಾಗೆ ಬಂದಿದ್ದೇವೆ ಎಂದು ರೈತ ಮುಖಂಡ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

Image

ಹಿರಿಯ ರೈತ ನಾಯಕ ರಾಕೇಶ್ ಟಿಕಾಯತ್, ಬಲ್ಬೀರ್ ಸಿಂಗ್ ರಾಜೇವಾಲ್, ಗುರ್ನಮ್ ಸಿಂಗ್ ಚಾರುನಿ, ದರ್ಶನ್ ಪಾಲ್, ಯೋಗೇಂದ್ರ ಯಾದವ್, ಯುಧಬೀರ್ ಸಿಂಗ್, ಮಂಜಿತ್ ಸಿಂಗ್, ಮತ್ತು ಹಿಮಾಂಶು ತಿವಾರಿ ಅವರುಗಳು ರ‍್ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಸುಮಾರು 5 ರ್ಯಾಲಿಗಳಲ್ಲಿ ರೈತ ಮುಖಂಡರು ಮಾತನಾಡಲಿದ್ದಾರೆ.

ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಎದುರು ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಸುವೆಂದು ಅವರನ್ನು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಲು ರೈತರು ಚುನಾವಣಾ ಪ್ರಚಾರ ಕಣಕ್ಕೆ ಧುಮುಕಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss