ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗ್ಪುರ ಲೋಕಸಭಾ ಕ್ಷೇತ್ರದ ಮತದಾರರನ್ನು ಮೂರನೇ ಬಾರಿಗೆ ಸಂಸತ್ತಿನಲ್ಲಿ ಪ್ರತಿನಿಧಿಸಲು ಜನಾದೇಶ ನೀಡಿದಕ್ಕಾಗಿ ಧನ್ಯವಾದ ಹೇಳಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ನಾಗ್ಪುರವನ್ನು ಮಾಲಿನ್ಯ ಮುಕ್ತ ನಗರವನ್ನಾಗಿ ಮಾಡಲು ಮತ್ತು ರೈತರ ಕಲ್ಯಾಣಕ್ಕೆ ಆದ್ಯತೆ ನೀಡುವುದಾಗಿ ಹೇಳಿದರು.
“ನಾಗ್ಪುರದ ಸಾರ್ವಜನಿಕರು ನನ್ನನ್ನು ಮೂರನೇ ಬಾರಿಗೆ ಆಯ್ಕೆ ಮಾಡಿದ್ದಾರೆ, ಅವರ ಬೆಂಬಲಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಬೆಂಬಲಕ್ಕಾಗಿ ನನ್ನ ಪಕ್ಷದ ಕಾರ್ಯಕರ್ತರು ಮತ್ತು ಸದಸ್ಯರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ಗಡ್ಕರಿ ಸುದ್ದಿಗಾರರಿಗೆ ತಿಳಿಸಿದರು.
“ನಾಗ್ಪುರವನ್ನು ಭಾರತದ ಸ್ವಚ್ಛ ಮತ್ತು ಮಾಲಿನ್ಯ ಮುಕ್ತ ನಗರವನ್ನಾಗಿ ಮಾಡಲು ನಾನು ಕೆಲಸ ಮಾಡುತ್ತೇನೆ. ಯುವಕರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು ಮತ್ತು ರೈತರ ಕಲ್ಯಾಣ ನನ್ನ ಇತರ ಆದ್ಯತೆಗಳು” ಎಂದು ಹೇಳಿದರು.
ಗಡ್ಕರಿ ಅವರು ಮಂಗಳವಾರ ಈ ಕ್ಷೇತ್ರದಲ್ಲಿ ತಮ್ಮ ಕಾಂಗ್ರೆಸ್ ಪ್ರತಿಸ್ಪರ್ಧಿಯನ್ನು 1,37, 603 ಮತಗಳ ಅಂತರದಿಂದ ಸೋಲಿಸಿದರು.
20 ಸುತ್ತಿನ ಮತ ಎಣಿಕೆಯಲ್ಲಿ ಅವರು ಕಾಂಗ್ರೆಸ್‌ನ ವಿಕಾಸ್ ಠಾಕ್ರೆ ಪಡೆದ 5,17,424 ಮತಗಳ ವಿರುದ್ಧ 6,55,027 ಮತಗಳನ್ನು ಪಡೆದರು.