ತೋಟದ ಮನೆಗೆ ನುಗ್ಗಿ ದರೋಡೆ: ಚಿನ್ನಾಭರಣ, ಹಣ, ಮೊಬೈಲ್ ಫೋನ್ ದೋಚಿ ಪರಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೃದ್ಧ ದಂಪತಿಯ ತೋಟದ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು, ಮೊಬೈಲ್ ದೋಚಿ ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ದೊಡ್ಡಮಧುರೆ ಗ್ರಾಮದಲ್ಲಿ ನಡೆದಿದೆ.

ಮೊಲಗಳನ್ನು ಹಿಡಿಯುವ ನೆಪದಲ್ಲಿ ಫಾರ್ಮ್‌ಹೌಸ್‌ಗೆ ನುಗ್ಗಿದ ಕಳ್ಳರ ಗುಂಪೊಂದು ಮನೆಯಲ್ಲಿದ್ದ ವೃದ್ಧ ದಂಪತಿಯ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿ ಪರಾರಿಯಾಗಿದ್ದಾರೆ.

ಚನ್ನೇಗೌಡ (75) ಮತ್ತು ಅವರ ಪತ್ನಿ ಮೇಲೆ ಹಲ್ಲೆ ನಡೆದಿದೆ. ಮನೆಯಲ್ಲಿದ್ದ ಎರಡು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಚನ್ನೇಗೌಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!