‘ರಾಷ್ಟ್ರಪತಿ ಚುನಾವಣೆ’ಗೆ ಸ್ಪರ್ಧಿಸಲು ನಿರಾಕರಿಸಿದ ಫಾರೂಕ್ ಅಬ್ದುಲ್ಲಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನ್ಯಾಷನಲ್ ಕಾನ್ಫರೆನ್ಸ್ (NC) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಜಂಟಿ ಅಭ್ಯರ್ಥಿಯಾಗಿ ತಮ್ಮ ಹೆಸರನ್ನು ಶನಿವಾರ ಹಿಂತೆಗೆದುಕೊಂಡಿದ್ದಾರೆ. ತಮ್ಮ ಹೆಸರನ್ನು ತಮ್ಮ ಅಭ್ಯರ್ಥಿಯಾಗಿ ಪ್ರಸ್ತಾಪಿಸಿದ್ದಕ್ಕಾಗಿ ಅಬ್ದುಲ್ಲಾ ಅವರು ವಿರೋಧ ಪಕ್ಷದ ನಾಯಕರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಆದ್ರೆ, ಜಮ್ಮು ಮತ್ತು ಕಾಶ್ಮೀರವನ್ನ ‘ನಿರ್ಣಾಯಕ ಘಟ್ಟದ ಮೂಲಕ’ ಮುನ್ನಡೆಸುವುದನ್ನ ಮುಂದುವರಿಸುವುದಾಗಿ ಹೇಳಿದರು.
‘ಮಮತಾ ದೀದಿ ಅವರು ನನ್ನ ಹೆಸರನ್ನು ಪ್ರಸ್ತಾಪಿಸಿದ ಬಳಿಕ ನನ್ನ ಉಮೇದುವಾರಿಕೆಗೆ ಬೆಂಬಲ ನೀಡುವುದಾಗಿ ವಿರೋಧ ಪಕ್ಷದ ನಾಯಕರಿಂದ ನನಗೆ ಹಲವಾರು ಕರೆಗಳು ಬಂದಿವೆ’ ಎಂದು ಅಬ್ದುಲ್ಲಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!