ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಹತ್ತಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳೂರು ನಗರದ ಹೊರವಲಯ ಸುರತ್ಕಲ್ ನಲ್ಲಿ ನಡೆದ ಗುರುವಾರ ರಾತ್ರಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹತ್ತಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ತನಿಖೆ ತೀವ್ರಗೊಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಫಾಝಿಲ್ ಹತ್ಯೆಗೆ ಸಂಬಂಧಿಸಿ ಪ್ರತ್ಯಕ್ಷದರ್ಶಿಗಳನ್ನು ಕೂಡ ವಿಚಾರಣೆ ಮಾಡುತ್ತಿದ್ದೇವೆ. ಘಟನೆಯ ನಿಷ್ಪಕ್ಷಪಾತ ತನಿಖೆ ನಡೆಸಲಾಗುತ್ತಿದೆ. ಹಂತಕರನ್ನು ಶೀಘ್ರವೇ ಬಂಧಿಸುತ್ತೇವೆ ಎಂದರು.

ಈಗಾಗಲೇ 144 ಸೆಕ್ಷನ್ ಜಾರಿಯಲ್ಲಿದೆ. ರಾತ್ರಿ 10ರ ಬಳಿಕ ಸಂಚರಿಸುವ ಎಲ್ಲಾ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!