ಹೊಸದಿಗಂತ ಆನ್ಲೈನ್ ಡೆಸ್ಕ್
ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಮೂಲಕ ನಾಗರಿಕರು ಸಹಕರಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಶಿವಮೊಗ್ಗದ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಈಗಾಗಲೇ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಬಜರಂಗದಳದ ಕಾರ್ಯಕರ್ತ ಹರ್ಷ ಹಂತಕರನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಭರವಸೆ ನೀಡಿದರು. ಹಿಂಸಾಚಾರ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್ ೧೪೪ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಯಾರೂ ಸಂಯಮ ಕಳೆದುಕೊಳ್ಳಬಾರದು. ಶಾಂತಿ ಕಾಪಾಡಲು ಸಹಕರಿಸಬೇಕು ಎಂದು ಅವರು ಜನತೆಯಲ್ಲಿ ಮನವಿ ಮಾಡಿದ್ದಾರೆ.