ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗೋವಾದ ದಾಬೋಲಿಮ್ ವಿಮಾನ ನಿಲ್ದಾಣ ಶೀಘ್ರದಲ್ಲೇ ಕರ್ನಾಟಕದ ಕಲಬುರಗಿ ಮತ್ತು ಮಹಾರಾಷ್ಟ್ರದ ನಾಗ್ಪುರಕ್ಕೆ ವಿಮಾನಯಾನವನ್ನು ಪ್ರಾರಂಭಿಸಲಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಎಸ್. ವಿ. ಟಿ.ಧನಂಜಯ್ ರಾವ್ ಮಾಹಿತಿ ನೀಡಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು-ಗೋವಾದ ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ ಚಾರ್ಟರ್ ಮತ್ತು ಅಂತಾರಾಷ್ಟ್ರೀಯ ವಿಮಾನಗಳನ್ನು ಇನ್ನಷ್ಟು ಸುಧಾರಿಸಲು ಏರ್‍ಪೋಟ್ರ್ಸ್ ಅಥಾರಿಟಿ ಆಫ್ ಇಂಡಿಯಾ (ಎಎಐ) ಸಿದ್ಧತೆ ನಡೆಸುತ್ತಿದೆ ಎಂದು ಅವರು ಹೇಳಿದರು.
2024 ರ ಮೇ ಅಥವಾ ಜೂನ್ ವೇಳೆಗೆ ದಾಬೋಲಿಮ್ ವಿಮಾನ ನಿಲ್ದಾಣದ ವಿಸ್ತರಣೆ ಪೂರ್ಣಗೊಳ್ಳಲಿದೆ. ಚಾರ್ಟರ್ ಆಪರೇಟರ್ ಗಳು ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ 175 ಸ್ಲಾಟ್‍ಗಳನ್ನು ಕಾಯ್ದಿರಿಸಿದ್ದಾರೆ. ಇದರಿಂದ ಮುಂಬರುವ ಪ್ರವಾಸೀ ಋತುವಿನಲ್ಲಿ ಗೋವಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ ಎಂದು ಎಸ್.ವಿ.ಟಿ ಧನಂಜಯ ಮಾಹಿತಿ ನೀಡಿದರು.
ದಾಬೋಲಿಂ ವಿಮಾನ ನಿಲ್ದಾಣ ಬಂದ್ ಆಗುವುದಿಲ್ಲ
ದಾಬೋಲಿಮ್ ವಿಮಾನ ನಿಲ್ದಾಣ ಪ್ರತಿಷ್ಠಿತ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ ಮತ್ತು ಎಎಐ ಪ್ರಕಾರ, ಪ್ರಯಾಣಿಕರ ಸಂಖ್ಯೆ ಎಂದಿಗೂ ಕಡಿಮೆಯಾಗುವುದಿಲ್ಲ. ಆದ್ದರಿಂದ ಈ ನಿಲ್ದಾಣವನ್ನು ಬಂದ್ ಮಾಡಲಾಗುವುದಿಲ್ಲ ಎಂದು ಹೇಳಿದರು.
ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಗುದಿನ್ಹೋ ಭಾಗವಹಿಸಿದ್ದರು.