October 17, 2026
Saturday, October 17, 2026
spot_img

ಎಕ್ಕೂರು ರೈಲ್ವೇ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ರೈಲ್ವೇ ಮೇಲ್ಸೇತುವೆಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿದ್ದಾನೆ.

ಮೃತರನ್ನು ಮೂಲತಃ ಕೇರಳದ ಪಾನತ್ತೂರು ನಿವಾಸಿಯಾಗಿದ್ದು, ಪ್ರಸ್ತುತ ಮಂಗಳೂರಿನ ಉರ್ವ ಚಿಲಿಂಬಿಯ ಮಾನಸ ರೆಸಿಡೆನ್ಸಿಯಲ್ಲಿ ವಾಸವಿದ್ದ ಸುಧೀಶ್ ಸಿ.ಕೆ (26) ಎಂದು ಗುರುತಿಸಲಾಗಿದೆ. ಅವರು ಮಂಗಳೂರಿನಲ್ಲಿ ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು.

ಭಾನುವಾರ ಮುಂಜಾನೆ ಕೇರಳದ ಪಾನತ್ತೂರಿನಿಂದ ಮಂಗಳೂರಿನತ್ತ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಎಕ್ಕೂರು ರೈಲ್ವೇ ಮೇಲ್ಸೇತುವೆ ಬಳಿ ಮುಂದೆ ಸಾಗುತ್ತಿದ್ದ ಈಚರ್ ಟಿಪ್ಪರ್ ಟ್ರಕ್‌ನ ಹಿಂಭಾಗಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಸುಧೀಶ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ:

ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪಘಾತದ ತೀವ್ರತೆಗೆ ರಸ್ತೆಯಲ್ಲೇ ರಕ್ತದ ಮಡುವು ನಿರ್ಮಾಣವಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Must Read