ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಬಿಜೋರಾದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಟ್ಟವಾದ ಮಂಜು ಮುಸುಕಿದ ವಾತಾವರಣವಿದ್ದ ಪರಿಣಾಮ ಮಾರ್ಗ ಕಾಣದೆ ಮದುವೆ ದಿಬ್ಬಣದ ವಾಹನ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನವಜೋಡಿ ಸೇರಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರಂತದ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ.