ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಮೃತರನ್ನು ನಾಗಸ್ವಾಮಿ ಮತ್ತು ದೊಡ್ಡಮಾದಯ್ಯ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಬಸ್‌ಗೆ ಬೈಕ್ ಡಿಕ್ಕಿ ಹೊಡೆದಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.