ಹೊಸದಿಗಂತ ವಿಜಯಪುರ:
ಬೈಕ್ ಹಾಗೂ ಸಾರಿಗೆ ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಮಸಬಿನಾಳದ ಸಾಗರ ಶ್ರೀಶೈಲ ಬೈಚಬಾಳ (26), ಸುದೀಪ ಉಮೇಶ ಗುದ್ದಿ (26) ಎಂದು ಗುರುತಿಸಲಾಗಿದೆ.
ಯುವಕರು ಬೈಕ್ ನಲ್ಲಿ ತೆರಳುತ್ತಿದ್ದಾಗ, ಬೈಕ್ ಹಾಗೂ ಸಾರಿಗೆ ಬಸ್ ಮಧ್ಯೆ ಡಿಕ್ಕಿಯಾಗಿದ್ದು, ಯುವಕರಿಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.