ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ಧನ್ಸೂರ್ ಹೆದ್ದಾರಿಯಲ್ಲಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಸ್ಸೊಂದು ಟ್ರ್ಯಾಕ್ಟರ್ ಅನ್ನು ಓವರ್ ಟೇಕ್ ಮಾಡಿ ಮುಂದೆ ಹೋಗಿದ್ದು, ನಂತರ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕಲು ಬೈಕ್ ಸವಾರ ಪ್ರಯತ್ನಿಸುವಾಗ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾನೆ.
ಹಿಂದೆಯಿಂದ ಬಂದ ಬಸ್, ಮುಂದೆ ಟ್ರ್ಯಾಕ್ಟರ್ ಹೋಗುತ್ತಿದ್ದ ಕಾರಣ ಚಾಲಕನಿಗೆ ಕಾಣದೆ ಬೈಕ್ ಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.