ACCIDENT | ಹುಬ್ಬಳ್ಳಿಯಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

ಹೊಸದಿಗಂತ ವರದಿ ಹುಬ್ಬಳ್ಳಿ:

ಕಾರು ಹಾಗೂ ಲಾರಿ ಮಧ್ಯೆ ಭೀಕರ ಅಪಘಾತವಾಗಿದ್ದು ಸ್ಥಳದಲ್ಲಿಯೇ ಐವರು ಮೃತ ಪಟ್ಟ ಘಟನೆ ಮಂಗಳವಾರ ನಸುಕಿನ ಜಾವ ತಾಲೂಕಿನ ಕಿರೇಸೂರ ಗ್ರಾಮದ ಬಳಿ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಶವಗಳನ್ನು ಹುಬ್ಬಳ್ಳಿ ಕೆಎಂಸಿಆರ್ ಐ ಆಸ್ಪತ್ರೆಗೆ ರವಾನಿಸುತ್ತಿದ್ದಾರೆ. ಮೃತಪಟ್ಟವರು ಗುರುತು ಪರಿಚಯ ಇನ್ನೂ ದೊರಕಿಲ್ಲ.

ಕಾರ್ ಬೆಂಗಳೂರಿನದು ಎಂದು ತಿಳಿದು ಬಂದಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸ್ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!