ಕಾರು-ಲಾರಿ ನಡುವೆ ಭೀಕರ ಅಪಘಾತ: 6 ಜನರು ಸ್ಥಳದಲ್ಲೇ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಜನರು ಸಾವನ್ನಪ್ಪಿರುವಂತಹ ದುರ್ಘಟನೆ ಸಂಭವಿಸಿದೆ.

ಫರಾನ್ (27), ಎಮ್ಮಿಶಿಪಾ (16), ಅಲಿಷಾ (20), ಪುಲಖಾನ್ (17) ಮೃತ ದುರ್ದೈವಿಗಳು. ಶಾಲೆ ರಜೆ ಹಿನ್ನಲೆ ಸಂಬಂಧಿಕರೆಲ್ಲಾ ಸೇರಿ ರಾಣೇಬೆನ್ನೂರಿನಿಂದ ಗೋವಾಕ್ಕೆ ಹೊರಟಿದ್ದರು ಎನ್ನಲಾಗಿದೆ. ಅತೀ ವೇಗ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡಿದಿದೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!