June 7, 2026
Sunday, June 7, 2026
spot_img

ಕಾರು-ಲಾರಿ ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾ*ವು

ಹೊಸದಿಗಂತ ವರದಿ ಬೀದರ್:

ಬಸವಕಲ್ಯಾಣ ತಾಲೂಕಿನ ತಾಡೋಳಾ ಗ್ರಾಮ ಸಮಿಪದ ರಾಷ್ಟ್ರೀಯ ಹೆದ್ದಾರಿ 65ರ ಬಳಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಮೃತಪಟ್ಟ ದುರ್ಘಟನೆ ಸೋಮವಾರ ನಡೆದಿದೆ.

ಜಾಫರ್ ವಾಡಿ ಗ್ರಾಮದ ನಿವಾಸಿ ಶಿವಕುಮಾರ್ (30) ಅಪಘಾತದಲ್ಲಿ ಮೃತಪಟ್ಟ ಯುವಕ.

ಹುಮನಾಬಾದ್ ನಿಂದ ಬಸವಕವಲ್ಯಾಣದ ಕಡೆಗೆ ತೆರಳುತ್ತಿದ್ದ ಕಾರಿಗೆ ಬಸವಕಲ್ಯಾಣ ಕಡೆಯಿಂದ ಹುಮನಾಬಾದ್ ಕಡೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಆಗಿರುವ ಕಾರಣ ಕಾರು ಚಾಲಕ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಚಾಲಕ ಶಿವಕುಮಾರ್ ಕೊನೆಯುಸಿರೆಳೆದಿರುವ ಬಗ್ಗೆ ತಿಳಿದು ಬಂದಿದೆ.

ಘಟನೆ ತಿಳಿದು ಬಸವಕವಲ್ಯಾಣ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಶರಣು ಸಲಗರ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ಕುರಿತು ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !