Thursday, December 1, 2022

Latest Posts

ಕ್ರೂಸರ್-ಬೈಕ್ ನಡುವೆ ಭೀಕರ ಅಪಘಾತ: ತಂದೆ, ಮಗಳು ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ, ವಿಜಯಪುರ:

ಕ್ರೂಸರ್, ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ತಂದೆ ಮತ್ತು ಮಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ರಸ್ತೆಯಲ್ಲಿ ನಡೆದಿದೆ.

ರಮೇಶ ನಾಟಿಕಕಾರ (45), ಖುಷಿ (8) ಎಂಬ ತಂದೆ ಮಗಳು ಸ್ಥಳದಲ್ಲೇ ಅಸುನೀಗಿದ್ದಾರೆ.

ಈ ಅಪಘಾತದಲ್ಲಿ ಖುಷಿಯ ತಾಯಿ ಶ್ರೀದೇವಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರು
ಬಸವನಬಾಗೇವಾಡಿ ತಾಲೂಕಿನ ಬೂದಿಗಾಳ ಗ್ರಾಮದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!