ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಮಂಚನಹಳ್ಳಿಯಲ್ಲಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಕಾರು ಚಾಲಕ ಸುನೀಲ್ (34) ಮೃತ ದುರ್ದೈವಿ, ರಮೇಶ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಸುನೀಲ್ ತಮ್ಮ ಕಾರಿನಲ್ಲಿ ಮೈಸೂರಿನಿಂದ ಹಾಸನದ ಕಡೆಗೆ ತೆರಳುತ್ತಿದ್ದರು. ಬಸ್ ಚಿಕ್ಕಮಗಳೂರಿನಿಂದ ಮೈಸೂರು ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ ಗಾಯಗಳಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.