October 13, 2026
Tuesday, October 13, 2026
spot_img

ಟ್ಯಾಂಕರ್ -ಆಟೋ ರಿಕ್ಷಾ ನಡುವೆ ಭೀಕರ ಅಪಘಾತ : ಸ್ಥಳದಲ್ಲಿಯೇ ಆರು ಮಂದಿ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟ್ಯಾಂಕರ್‌ ಹಾಗೂ ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಮಂಡಲದ ಸತ್ವಾರ್ ಗ್ರಾಮದ ಸಮೀಪ ನಡೆದಿದೆ.

ಆಟೋ ರಿಕ್ಷಾ ಯೂಟರ್ನ್‌ ತೆಗೆದುಕೊಳ್ಳುವ ವೇಳೆ ಅಪಘಾತ ಸಂಭವಿಸಿದೆ. ಒಂದೇ ಆಟೋದಲ್ಲಿ 12 ಮಂದಿ ಪ್ರಯಾಣಿಸುತ್ತಿದ್ದರು. ಇದರಲ್ಲಿ ಆರು ಮಂದಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದು, ಉಳಿದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಮೃತರ ಗುರುತು ಪತ್ತೆ

ಬೀದರ್‌ ಜಿಲ್ಲೆಯ ರಾಜಗೀರಾ ಗ್ರಾಮದ ನಿವಾಸಿಗಳಾದ ರೇಖಾ, ಶ್ರೀದೇವಿ, ಕವಿತಾ, ರೇಷ್ಮಾ, ನಿಖಿತಾ ಹಾಗೂ ಆಟೋ ಚಾಲಕ ದೇವದಾಸ್ ಮೃತರು. ನಿರ್ಮಲಾ, ತುಳಜಮ್ಮ, ಚಂದ್ರಕಲಾ, ರಾಧಿಕಾ, ಶಿಲ್ಪಾ ಮತ್ತು ಶೋಭಾ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ

ರಾಜಗೀರಾ ರಾಜಗೀರಾ ಗ್ರಾಮದ 6 ಜನ ಮೃತಪಟ್ಟಿರುವುದು ಅತ್ಯಂರ ದುಖಃಕರ ಸಂಗತಿ. ಸಿಎಂ ನಿಧಿಯಿಂದ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲಾಗುತ್ತೆ ಎಂದು ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಿದ್ದು, ಸಚಿವರು ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದಿದ್ದಾರೆ.

Must Read