ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಬಳಿ ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರು ನಡುವೆ ಅಪಘಾತ ಸಂಭವಿಸಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊಸನಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಓಮಿನಿ ಕಾರು ಹಾಗೂ ಅದೇ ಮಾರ್ಗವಾಗಿ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ 6 ಮಕ್ಕಳು ಸೇರಿದಂತೆ 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಹೊಸನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಹೆಚ್ಚಿನ ಚಿಕಿತ್ಸೆಗಾಗಿ ಸಂತ್ರಸ್ತರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮಿನಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
ಗಾಯಗೊಂಡವರೆಲ್ಲರೂ ಹೊಸನಗರದ ಕೊಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾರಕ್ಕಿ ಬಳಿಯ ಬುಲ್ಡೋಜರ್ ಗುಡ್ಡದ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.