ಸಾರಿಗೆ ಬಸ್ – ಲಾರಿ ನಡುವೆ ಭೀಕರ ಅಪಘಾತ; ಆರು ಮಂದಿಗೆ ಗಂಭೀರ ಗಾಯ

ಹೊಸದಿಗಂತ ವರದಿ ಅಂಕೋಲಾ: ಸಾರಿಗೆ ಸಂಸ್ಥೆಯ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ 6 ಜನರು ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಅಗಸೂರು ಸರಳೇಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸಂಭವಿಸಿದೆ. ಕಾರವಾರದಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಬಸ್ ಸ್ಟಿಯರಿಂಗ್ ಜಾಮ್ ಆದ ಕಾರಣ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು ಬಸ್ಸಿನಲ್ಲಿದ್ದ ಸುಮಾರು 40 ಕ್ಕೂ ಹೆಚ್ಚಿನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಅಂಕೋಲಾ ಪೊಲೀಸರು ಸ್ಥಳಕ್ಕೆ ದಾವಿಸಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.