ಟ್ರಕ್-ಟಾಟಾ ಎಸ್ ನಡುವೆ ಭೀಕರ ಅಪಘಾತ: ನಾಲ್ವರು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಟ್ರಕ್ ಮತ್ತು ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಮೃತ ದುರ್ದೈವಿಗಳು.

ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಬೀದರ್‌ನ ಬ್ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರೆಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದುಬಂದಿದೆ.

ಟಾಟಾ ಎಸ್ ನಲ್ಲಿ ಒಟ್ಟು 14 ಜನರು ಉಗ್ಗಿರ್ ನಿಂದ ಹೈದರಾಬಾದ್ ಗೆ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರಲ್ಲಿ 6 ಮಹಿಳೆಯರು, 5 ಪುರುಷರು ಮತ್ತು 3 ಮಕ್ಕಳು ಇದ್ದರು ಎನ್ನಲಾಗಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಇನ್ನುಳಿದವರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ದನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!