ಬೆಂಗಳೂರಲ್ಲಿ ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ವೃದ್ಧ ಮೃತ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಪಾದಚಾರಿಯೊಬ್ಬರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಗಾರೆಡ್ಡಿ (85) ಎಂಬ ವ್ಯಕ್ತಿ ಮೃತಪಟ್ಟಿರುವ ಘಟನೆ ಮೆಜೆಸ್ಟಿಕ್ ಬಸ್ ಸ್ಟ್ಯಾಂಡ್ ಬಳಿ ನಡೆದಿದೆ.

ಗಂಗಾರೆಡ್ಡಿ ಆಂಧ್ರಪ್ರದೇಶದವರಾಗಿದ್ದು, ಬೆಂಗಳೂರಿನ ಬಸವೇಶ್ವರ ನಗರದಲ್ಲಿ ವಾಸವಿದ್ದರು. ಗುರುವಾರ ಮಧ್ಯಾಹ್ನ 12:30ರ ಸುಮಾರಿಗೆ ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಕೆಎಸ್‌ಆರ್‌ಟಿಸಿ ಬಸ್‌ ಮೂಡಿಗೆರೆ ಡಿಪೋಗೆ ಸೇರಿದ್ದು ಎಂಬುದು ಪತ್ತೆಯಾಗಿದೆ. ಉಪ್ಪಾರಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!