ಹಾಸನದಲ್ಲಿ ಭೀಕರ ಅಪಘಾತ: ಕಾರು-ಟ್ರಕ್ ಮುಖಾಮುಖಿ ಡಿಕ್ಕಿ, 6 ಜನರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನ ಹೊರವಲಯದ ಈಚನಹಳ್ಳಿ ಬಳಿ ಇಂದು ಮುಂಜಾನೆ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರಿನಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಇದ್ದರು. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಆಯುಕ್ತ ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರದ ಆರು ಮಂದಿ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿ ಮಾಡಿ ಮನೆಗೆ ಮರಳಿದ್ದಾರೆ. ಈಚನಹಳ್ಳಿ ಬಳಿ ನಿದ್ದೆ ಮಂಪರಿನಲ್ಲಿ ಮುಂಜಾನೆ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಮನೋಜ್ ಕುಮಾರ್ ಎಂಬುವವರಿಗೆ ಸೇರಿದ ಕಾರು ಇದಾಗಿದೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಡಿ.ಎಲ್. ನಾಗೇಶ್ ಹಾಗೂ ಆರ್ ಟಿಒ ಅಧಿಕಾರಿಗಳು ಕೂಡಲೇ ವಾಹನದ ವಿಳಾಸ ಹಾಗೂ ಅದರಲ್ಲಿದ್ದ ಪ್ರಯಾಣಿಕರ ವಿಳಾಸವನ್ನು ಪತ್ತೆ ಹಚ್ಚುವಂತೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!