ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಗದಂಪುರ ಬಳಿ ದುರಂತ ಸಂಭವಿಸಿದೆ. ಅವಿನಾಶ್(24), ಅಭಿಷೇಕ್(26), ಸಂಜೀವ್(40) ಮೃತರು. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿನಲ್ಲಿದ್ದವರು ಬೀದರ್ನಿಂದ ತೆಲಂಗಾಣದ ಧಾರೂರಿನತ್ತ ತೆರಳುತ್ತಿದ್ದರು. ಈ ವೇಳೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಮೂವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.