August 10, 2026
Monday, August 10, 2026
spot_img

ಕೂಡುಮಂಗಳೂರಿನಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಾವು, ಪತ್ನಿಯ ಕಾಲು ಮುರಿತ

ಹೊಸದಿಗಂತ ವರದಿ,ಕುಶಾಲನಗರ:

ಕೂಡುಮಂಗಳೂರು ಗ್ರಾಮದ ದೊಡ್ಡಮ್ಮ ತಾಯಿ ದೇವಾಲಯ ಮುಂಭಾಗ ಬೈಕ್’ಗೆ ಗೂಡ್ಸ್ ವಾಹನ‌ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಡೆದಿದೆ.

ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರೂರು ಗ್ರಾಮದ ನಟೇಶ್ (31) ಮೃತ ದುರ್ದೈವಿ. ಬೈಕ್ ಹಿಂಬದಿಯಿದ್ದ ನಟೇಶ್ ಪತ್ನಿ ದಿವ್ಯಾ (30) ಅವರ ಎಡಗಾಲು ಮುರಿದಿದೆ.

ಬೈಕ್ ತಿರುಗಿಸುತ್ತಿದ್ದ ಸಂದರ್ಭ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಕೂಡಲೇ ಗಾಯಾಳುಗಳನ್ನು ಕುಶಾಲನಗರ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದು, ತಲೆಗೆ ಗಂಭೀರ ಗಾಯಗೊಂಡಿದ್ದ ನಟೇಶ್ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.

ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !