ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರ್ ಡಿಕ್ಕಿ ಹೊಡೆದು, ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಸ್ಥಳೀಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ತುಮಕೂರು ತಾಲೂಕಿನ ಕೋರಾ ಸೇತುವೆ ಬಳಿ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಇನ್ನೂ ತಿಳಿದುಬಂದಿಲ್ಲ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.