October 10, 2026
Saturday, October 10, 2026
spot_img

SHOCKING | ಉಡುಪಿಯಲ್ಲಿ ಭೀಕರ ಅಪಘಾತ: ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳಿದ್ದ ಬಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಶಿವಮೊಗ್ಗದ ಶಂಕರಘಟ್ಟದ ರಂಭಾಪುರಿ ಕಾಲೇಜಿನ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಮುರುಡೇಶ್ವರದಿಂದ ಉಡುಪಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಬಸ್ಸಿನಲ್ಲಿ ಒಟ್ಟು 47 ಮಂದಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

Must Read