September 1, 2026
Tuesday, September 1, 2026
spot_img

ಧಾರವಾಢ ಬಳಿ ಭೀಕರ ಅಪಘಾತ: ಕಾರು ಪಲ್ಟಿಯಾಗಿ ಮೂವರು ಯುವಕರು ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೆಂಕಟಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಭವಿಸಿದ್ದು, ದಾವಣಗೆರೆ ಮೂಲದ ವಿನಾಯಕ್ (25), ಮಂಜುನಾಥ್ (29) ಹಾಗೂ ಬಸವರಾಜ (34) ಎಂಬುವವರು ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಭಿಷೇಕ, ಅಜಯ್ ಹಾಗೂ ಬಸನಗೌಡ ಎಂಬ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಡಿವೈಡರ್‌ಗೆ ಗುದ್ದಿ ಕಾರ್‌ ಪಲ್ಟಿ

ಬೆಳಗಾವಿ‌ ಕಡೆಯಿಂದ ಧಾರವಾಡಕ್ಕೆ ಬರುತ್ತಿರುವ ವೇಳೆ ಮುಂದಿದ್ದ ವಾಹನ ಡಿಕ್ಕಿ ತಪ್ಪಿಸಲು ಹೋಗಿ ಡಿವೈಡರ್​ಗೆ ಗುದ್ದಿ ಕಾರ್​ ಪಲ್ಟಿ ಹೊಡೆದಿದೆ. ಇದರ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಇಡಲಾಗಿದೆ.ಸ್ಥಳಕ್ಕೆ ಗರಗ ಠಾಣೆ ಪಿಎಸ್ಐ ಪ್ರವೀಣ ಗಂಗೋಳ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !