March 29, 2026
Sunday, March 29, 2026
spot_img

ಹೊಸಕೋಟೆ ಬಳಿ ಭೀಕರ ಅಪಘಾತ: ಕಾರು–ಕಂಟೇನರ್ ಬೆಂಕಿಗಾಹುತಿ, ಮೂವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಸಕೋಟೆ ತಾಲೂಕಿನ ಹಲಸಹಳ್ಳಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಮತ್ತು ಕಂಟೇನರ್ ಲಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ಅಪಘಾತದಲ್ಲಿ ಕಾರು ಮತ್ತು ಕಂಟೇನರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಕ್ಷಣವೇ ಬೆಂಕಿ ಕಾಣಿಸಿಕೊಂಡಿತು. ಡಿಕ್ಕಿಯ ತೀವ್ರತೆಯಿಂದ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾದರೆ, ಕಂಟೇನರ್ ಕೂಡ ಸುಟ್ಟು ಹಾನಿಯಾಗಿದೆ.

ಇದನ್ನೂ ಓದಿ:

ಘಟನೆಯ ಮಾಹಿತಿ ಸಿಕ್ಕ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಎರಡುಕ್ಕೂ ಹೆಚ್ಚು ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಸ್ಥಳೀಯರ ತ್ವರಿತ ಪ್ರತಿಕ್ರಿಯೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಅಪಘಾತದ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !