ಕೊಡಚಾದ್ರಿ ಬಳಿ ಭೀಕರ ಅಪಘಾತ: ಜೀಪ್-ಟಿಟಿ ಮುಖಾಮುಖಿ ಡಿಕ್ಕಿ, 8 ಮಂದಿ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜೀಪ್ ಹಾಗೂ ಟಿಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 8 ಮಂದಿ ಗಾಯಗೊಂಡ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ನಡೆದಿದೆ.

ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್‌ಗೆ ಶಿವಮೊಗ್ಗ  ಕಡೆಯಿಂದ ತೆರಳುತ್ತಿದ್ದ ಟಿಟಿ ವಾಹನ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ಪರಿಣಾಮ ಜೀಪ್‌ನಲ್ಲಿದ್ದ 8 ಜನಗಾಯಗೊಂಡಿದ್ದಾರೆ. ಇದರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!