Thursday, September 4, 2025

ಹಬ್ಬದ ದಿನವೇ ಭೀಕರ ಅಪಘಾತ: ಬಸ್‌ ಟೈಯರ್‌ ಬ್ಲಾಸ್ಟ್‌ ಆಗಿ ಬೈಕ್‌ಗೆ ಡಿಕ್ಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗಣೇಶ ಹಬ್ಬದಂದೇ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಗ್ರಾಮದ ಬಳಿ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಟ್ಟಿದ್ದಾರೆ.

ಮಾಗಡಿ ತಾಲೂಕಿನ ಅರಳಕುಪ್ಪೆ ಗ್ರಾಮದ  ನಿವಾಸಿಗಳಾಗಿದ್ದು, ಗ್ರಾಮದಿಂದ ಮಾಗಡಿ ಪಟ್ಟಣಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್​​ವೊಂದರ ಟೈರ್​ ಬ್ಲಾಸ್ಟ್​ ಆಗಿ ಬೈಕ್​ಗೆ ಡಿಕ್ಕಿ ಹೊಡೆದಿದ್ದು, ಇದರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಶಿವಣ್ಣ (58) ಮತ್ತು ಗಂಗಮ್ಮ (53) ಎಂದು ಗುರುತಿಸಲಾಗಿದ್ದು, ಇವರು ಮಾಗಡಿ ತಾಲೂಕಿನ ಅರಳಕುಪ್ಪೆ ಗ್ರಾಮದ ನಿವಾಸಿಗಳಾಗಿದ್ದರು. ಈ ದುರ್ಘಟನೆಯು ಖಾಸಗಿ ಬಸ್‌ನ ಟಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿಯಾದ ಕಾರಣದಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ