October 9, 2026
Friday, October 9, 2026
spot_img

ಬಾಗೇಪಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಿಂತಿದ್ದ ಲಾರಿಗೆ ಆಟೋ ಡಿಕ್ಕಿ, ಐವರು ದುರ್ಮರಣ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಬಳ್ಳಾಪುರದ ಬಾಗೇಪಲ್ಲಿ ರಾಷ್ಟ್ರೀಯ ಹೆದ್ದಾರಿ ಸುಂಕಲಮ್ಮ ದೇವಸ್ಥಾನ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐದು ಮಂದಿ ಸಾವನ್ನಪ್ಪಿದ್ದಾರೆ.

ಕಾರು ಡಿಕ್ಕಿಗೆ ನಿಯಂತ್ರಣ ತಪ್ಪಿದ ಆಟೋ

ಆಟೋ, ಥಾರ್ ಕಾರು ಮತ್ತು ಕಂಟೇನರ್ ನಡುವೆ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ವೇಗವಾಗಿ ಬಂದ ಥಾರ್ ಕಾರು ಮುಂದೆ ಚಲಿಸುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ನಿಯಂತ್ರಣ ತಪ್ಪಿ ಮುಂಭಾಗದಲ್ಲಿ ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಅಪ್ಪಳಿಸಿದೆ. ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಹತ್ತಕ್ಕೂ ಹೆಚ್ಚು ಜನರನ್ನು ತಕ್ಷಣ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Must Read