August 30, 2026
Sunday, August 30, 2026
spot_img

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೆದ್ದಾರಿಯಲ್ಲಿದ್ದ ಸೈನ್‌ ಬೋರ್ಡ್‌ಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬಸ್‌ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

ರಾಮನಗರ ತಾಲೂಕಿನ ಅವರಗೆರೆ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಬಸ್ ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸಿದ್ದು ಹೇಗೆ?

ಕೇರಳದಿಂದ ಬೆಂಗಳೂರಿನ ಕಡೆಗೆ ಕೆಎಸ್‌ಆರ್‌ಟಿಸಿ ಬಸ್‌ ಬರುತ್ತಿತ್ತು. ರಾಮನಗರ ತಾಲೂಕಿನ ಅವರಗೆರೆ ಗೇಟ್‌ ಬಳಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿದ್ದ ಬೃಹತ್‌ ಸೈನ್‌ ಬೋರ್ಡ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ತಕ್ಷಣ ಬಸ್ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಪರಿಣಾಮವಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಸ್‌ನಲ್ಲಿದ್ದ ಇತರ ಪ್ರಯಾಣಿಕರಿಗೆ ಸಣ್ಣಪುಟ್ಟ ಹಾಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ಹಿನ್ನೆಲೆ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !